× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೪ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.೨ [2]ಇವರು ಇಸ್ರಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಇಸ್ರಯೇಲರು ಸೋತರು. ರಣರಂಗದಲ್ಲಿ ಸುಮಾರು ನಾಲ್ಕು ಸಾವಿರಮಂದಿ ಇಸ್ರಯೇಲರನ್ನು ಫಿಲಿಷ್ಟಿಯರು ಸಂಹರಿಸಿದರು.೩ [3]ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.೪ [4]ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.೫ [5]ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು.೬ [6]ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು.೭ [7]“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ.೮ [8]ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ?೯ [9]ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು.೧೦ [10]ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.೧೧ [11]ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.೧೨ [12]ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು,೧೩ [13]ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು.೧೪ [14]ಈ ಗದ್ದಲವೇನೆಂದು ವಿಚಾರಿಸಿದನು. ಒಡನೆ ಆ ವ್ಯಕ್ತಿ ಏಲಿಯ ಬಳಿಗೆ ಬಂದು ಎಲ್ಲವನ್ನು ತಿಳಿಸಿದನು.೧೫ [15]ಏಲಿ ಆಗ ತೊಂಬತ್ತೆಂಟು ವರ್ಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.೧೬ [16]ಆ ವ್ಯಕ್ತಿ ಏಲಿಗೆ, “ನಾನು ರಣರಂಗದಲ್ಲಿ ಇದ್ದವನು; ಈಹೊತ್ತೇ ಅಲ್ಲಿಂದ ಓಡಿಬಂದೆ,” ಎನ್ನಲು ಏಲಿ, “ಮಗು, ಏನು ಸುದ್ದಿ?” ಎಂದು ಕೇಳಿದನು.೧೭ [17]ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು.೧೮ [18]ಮುದುಕನೂ ಸ್ಥೂಲಕಾಯನೂ ಆದ ಏಲಿ ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದ್ದೇ, ಪೀಠದಿಂದ ಹಿಂದಕ್ಕೆ, ಬಾಗಿಲಿನ ಕಡೆಗೆ ಬಿದ್ದು, ಕುತ್ತಿಗೆ ಮುರಿದು ಸತ್ತನು. ಏಲಿ ಇಸ್ರಯೇಲರನ್ನು ನಾಲ್ವತ್ತು ವರ್ಷ ಪಾಲಿಸಿದ್ದನು.೧೯ [19]ಫೀನೆಹಾಸನ ಹೆಂಡತಿಯಾದ ಏಲಿಯ ಸೊಸೆ ದಿನತುಂಬಿದ ಗರ್ಭಿಣಿ. ದೇವರ ಮಂಜೂಷ ಶತ್ರುವಶವಾದದ್ದನ್ನು ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.೨೦ [20]ಆಕೆ ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಮಹಿಳೆಯರು, “ಭಯಪಡಬೇಡ, ಮಗನನ್ನು ಹೆತ್ತಿದ್ದೀ,” ಎಂದು ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ. ಪ್ರತ್ಯುತ್ತರವನ್ನೂ ಕೊಡಲಿಲ್ಲ.೨೧ [21]ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.೨೨ [22]ದೇವರ ಮಂಜೂಷ ಶತ್ರುವಶವಾದ್ದರಿಂದಲೇ ಇಸ್ರಯೇಲರ ಮಹಿಮೆ ಮಾಯವಾಯಿತೆಂದು ಹೇಳಿದಳು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/004.mp3 31 4