ಬೈಬಲ್ ಆವೃತ್ತಿ ಹೋಲಿಕೆ ಮಾಡಿ
- |
|---|
| ೧ |
| ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು. |
| ೨ |
| ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು. |
| ೩ |
| ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. |
| Kannada Bible 2022
ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ 1999, 2020, 2022 Biblica, Inc. ಅನುಮತಿಯೊಂದಿಗೆ ಬಳಸಲಾಗಿದೆ ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. Holy Bible, Kannada Contemporary Version™ 1999, 2020, 2022 by Biblica, Inc. |
| ೧ |
| ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು. |
| ೨ |
| ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. |
| ೩ |
| ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು. |
| Kannada Bible IRV 2019
KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app. |
| ೧ |
| ಆತನು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು. |
| ೨ |
| ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು. |
| ೩ |
| ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. |
| Kannada Bible BSI 2016
Kannada J.V. Bible The Bible Society of India, 2016. Used by permission. worldwide. |
| ೧ |
| ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು. |
| ೨ |
| ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. |
| ೩ |
| ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು. |
| Kannada Bible (KNCL) 2016
Kannada C.L. Bible - ಸತ್ಯವೇದವು C.L. 2016 by The Bible Society of India Used by permission. worldwide |
| ೧ |
| ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು. |
| ೨ |
| ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು. |
| ೩ |
| ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು. |
| Kannada Bible BSI 2016
2016 by The Bible Society of India. worldwide |
| ೧ |
| ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು. |
| ೨ |
| ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. |
| ೩ |
| ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು. |
| Kannada Bible 1997
Kannada Holy Bible: Easy-to-Read Version 1997 Bible League International |