ಯೇಸುಸ್ವಾಮಿ ಅವರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ?
ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.
ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.
ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II
[೨೪] ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ! [೨೫] ಸರ್ವೇಶ್ವರ ಪ್ರಸನ್ನ ಮುಖದಿಂದ ನಿಮ್ಮನ್ನು ನೋಡಿ ನಿಮಗೆ ದಯೆ ತೋರಲಿ!
[೬] ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ. [೭] ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.
ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.
ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.
ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.
[೧೬] “ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ; [೧೭] ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.
[೧] ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II [೨] ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II [೩] ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II
[೧] ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II [೨] ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II [೩] ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II [೪] ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
[೩] ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ. [೪] ಸರ್ವೇಶ್ವರನು ಸ್ತುತ್ಯಾರ್ಹನು ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು
ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.
ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II
ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.
ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.
Kannada Bible (KNCL) 2016
Kannada C.L. Bible - ಸತ್ಯವೇದವು C.L. 2016 by The Bible Society of India Used by permission. worldwide